ಬೆಳಗಾವಿ : 2020-21ನೇ ಸಕ್ಕರೆ ಹಂಗಾಮಿಗೆ ಕಬ್ಬು ರೈತರಿಗೆ ಬಾಕಿ ಬಿಲ್ಲನ್ನು ತಕ್ಷಣವೇ ಪಾವತಿಸಬೇಕು ಎಂದು ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಬ್ಬು ಸರಬರಾಜು ಮಾಡಿದ ರೈತರಿಗೆ ಕಬ್ಬು ನಿಯಂತ್ರಣ ಅಧಿನಿಯಮ-1966 ರಂತೆ ಕಬ್ಬು ಸರಬರಾಜು ಮಾಡಿದ 14 ದಿನದೊಳಗಾಗಿ ಮೊತ್ತ ಪಾವತಿಸಬೆಕೇಂಬ ನಿಯಮವಿದೆ. ಆದರೆ ಆಯುಕ್ತರು ಬಿಡುಗಡೆ ಮಾಡಿರುವ ವರದಿ 30-4-2021 ರಂತೆ ಇನ್ನೂ ಕೆಲವು ಕಾರ್ಖಾನೆಯವರು ಪ್ರತಿಶತ 90% ಕ್ಕಿಂತ ಕಡಿಮೆ ಮೊತ್ತ ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಬಾಕಿ ಉಳಿದಿರುವ ಕಬ್ಬಿನ ಬಿಲ್ಲನ್ನು ಮೇ-2021 ರ ಅಂತ್ಯದೊಳಗೆ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಬಾಕಿ ಬಿಲ್ ಪಾವತಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ವರದಿ ಸಲ್ಲಿಸಲು ತಪ್ಪಿದ್ದಲ್ಲಿ ಕಬ್ಬು ನಿಯಂತ್ರಣ ಅಧಿನಿಯಮ-1966 ರಡಿ ಶಿಸ್ತು ಕ್ರಮ ಜರುಗಿಸಲು ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ಬೆಂಗಳೂರು ಇವರಿಗೆ ಶಿಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.