ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲಾ: ನಳಿನ್ ಕುಮಾರ್ ಕಟೀಲ್

  • 15 Jan 2024 , 1:30 AM
  • Bengaluru
  • 89

ಬೆಂಗಳೂರು: ರಾಜ್ಯದ ರಾಜಕಾರಣದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತು ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ಈಗಾಗಲೇ ಬಿಜೆಪಿ ನಾಯಕರು, ಹೈಕಮಾಂಡ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟ ಪಡಿಸಿದರು.

ಕೊರೋನಾ ಅಬ್ಬರದ ನಡುವೆಯೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚರ್ಚೆಗಳು ನಡೆಯುತ್ತಿದ್ದವು ಆದರೆ ಇದೆಲ್ಲವು ತಣ್ಣಗಾಗಿದೆ.

ರಾಜ್ಯದಲ್ಲಿ ಈಗ ಕೋವಿಡ್ ಕೆಲಸ ಮಾತ್ರ ನಡೆಯುತ್ತಿದೆ. ಬೇರೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ, ಮುಂದುವರೆದು ಮಾತನಾಡಿದ ಅವರು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ. ಯಡಿಯೂರಪ್ಪ ನಮ್ಮ ನಾಯಕರು.

ಮುಂದಿನ ಎರಡು ವರ್ಷ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರ ಅಧಿಕಾರವನ್ನು ಕೂಡ ಪೂರ್ಣಗೊಳಿಸ್ತಾರೆ‌. ಶಾಸಕರಿಗೆ ಈ ಹಿಂದೆಯೇ ಸೂಚಿಸಿದ್ದೆನೆ, ಈಗಲೂ ಅದೇ ಸೂಚನೆ ಕೊಡುತ್ತಿದ್ದೇನೆ.

ಈಗ ಕೋವಿಡ್ ಕೆಲಸ ಮಾಡಬೇಕು, ಬೇರೆ ರಾಜಕೀಯ ಚಟುವಟಿಕೆ ಮಾಡಬಾರದು ಎಂದು ಭಿನ್ನಮತೀಯ ಶಾಸಕರಿಗೆ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.

Read All News