ಕೋವಿಡ್ 19 ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಶಾಸಕ ಸತೀಶ್

  • 14 Jan 2024 , 10:46 PM
  • Belagavi
  • 130

ಬೆಳಗಾವಿ :ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್" ಗೆ ಇಂದು ಚಾಲನೆ ನೀಡಲಾಯಿತು.

ಈ‌ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ‌ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.

"ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆ, ಸಲಹೆ, ಸೂಚನೆಗಳನ್ನು ನೀಡುವುದು, ಸೋಂಕಿತರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವುದು, ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ಯುವುದು ಸೇರಿ ಇನ್ನಿತರೇ ಸೌಕರ್ಯಗಳನ್ನು ಕೋವಿಡ್ ಹೆಲ್ಪ್ ಲೈನ್ ಸೆಂಟರ್ ಮೂಲಕ ಒದಗಿಸಲಾಗುವುದು. ಜಿಲ್ಲೆಯ ಜನರು ಇದರ ಸದುಪಯೋಗ ಪಡೆಯಬೇಕು".

Read All News