SSLC ಪರೀಕ್ಷಾ ಕೇಂದ್ರದ ಸಿದ್ಧತೆ: ಮುಖ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕರಿಂದ ಪರಿಶೀಲನೆ
- 15 Jan 2024 , 6:00 AM
- Belagavi
- 112
ಬೆಳಗಾವಿ: ಕೊರೊನಾ ಆತಂಕದ ಮಧ್ಯೆಯೇ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಸರ್ಕಾರವೇನೋ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದೇವೆ. ಯಾವುದೇ ಆತಂಕವಿಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ತಿಳಿಸಿದೆ. ಬೆಳಗಾವಿ ಮುಖ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಡಾ. ರಾಜೇಂದ್ರ ಕೆ.ವಿ ಬೆಳಗಾವಿ ನಗರದ ಸರದಾರ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರಕಾರ ಕೋವಿಡ್ 19 ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಅವರು ಪರೀಕ್ಷಾ ಕೇಂದ್ರದ ಸ್ಯಾನಿಟೈಸಿಂಗ್, ಮಾರ್ಕಿಂಗ್, ಕೊಠಡಿಗಳ ಸ್ವಚ್ಛತೆ ಸಾಮಾಜಿಕ ಅಂತರ ಬಗ್ಗೆ ಪರಿಶೀಲಿಸಿ ಮುಖ್ಯವಾಗಿ ಶೌಚಾಲಯದ ಸ್ವಚ್ಛತೆ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಹಾಗೂ ಸಿಬ್ಬಂದಿಯವರಿಗೆ ನಿರ್ದೇಶಿಸುವಂತೆ ತಿಳಿಸಿದರು ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳಿಗೆ ಕಲ್ಪಿಸಲಾಗಿರುವ ವಿವಿಧ ಸೌಲಭ್ಯಗಳನ್ನು ಹಾಗೂ ಪರೀಕ್ಷಾ ಕೊಠಡಿಗಳನ್ನು ಪರಿಶೀಲಿಸಿದರು.