ಬೀಜಿಂಗ್: ಪ್ರತಿ ದಂಪತಿಗೆ ಮೂರು ಮಕ್ಕಳನ್ನು ಹೊಂದಲು ಚೀನಾ ಸರ್ಕಾರ ಅನುಮತಿ ನೀಡಲಾಗಿದೆ. ಈ ಬಗ್ಗೆ ಚೀನಾದ ಕ್ಸಿ ಜಿನ್‌ಪಿಂಗ್ ಸರ್ಕಾರ ಸೋಮವಾರ ಘೋಷಿಸಿದ್ದು. ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಜನನ ಪ್ರಮಾಣದಲ್ಲಿ ಅಪಾರ ಕುಸಿತ ಕಂಡ ನಂತರ ಅಸ್ತಿತ್ವದಲ್ಲಿರುವ ಎರಡು ಮಕ್ಕಳ ಮಿತಿಯಿಂದ ಪ್ರಮುಖ ನೀತಿ ಬದಲಾವಣೆಯನ್ನು ಮಾಡಲಾಗಿದೆ ಎಂದು ಹೇಳಲಾಗಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಾಲಿಟ್‌ಬ್ಯೂರೋ ಸಭೆಯಲ್ಲಿ ಈ ಬದಲಾವಣೆಯನ್ನು ಅನುಮೋದಿಸಲಾಗಿದೆ ಎಂದು ಸುದ್ದಿ ಸಂಸ್ಥೆವೊಂದು ವರದಿ ಮಾಡಿದೆ.