ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅಸ್ತವ್ಯಸ್ತ, ಆಸ್ಪತ್ರೆಗೆ ದಾಖಲು
- 14 Jan 2024 , 10:43 PM
- Belagavi
- 103
ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹದಿನಾರು ವರ್ಷದ ವಿದ್ಯಾರ್ಥಿನಿಗೆ ಆರೋಗ್ಯದಲ್ಲಿ ಏರುಪೇರಾದ ಘಟನೆ ಗೋಕಾಕ್ ಪಟ್ಟಣದ ಎಲ್.ಇ. ಟಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಇದರಿಂದ ಕೆಲಕಾಲ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದ್ದು ಪರೀಕ್ಷಾ ಕೇಂದ್ರಕ್ಕೆ ತಾಲೂಕಾ ವೈದ್ಯಾಧಿಕಾರಿ ಡಾ.ಜಗದಿಶ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ ನಂತರ ಆರೋಗ್ಯದಲ್ಲಿ ಸ್ಥಿರ ಕಾಣದ ಹಿನ್ನೆಲೆಯಲ್ಲಿ ಅಂಬ್ಯುಲೆನ್ಸ್ ಮೂಲಕ ತಾಲೂಕಾ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲು ಮಾಡಲಾಗಿದೆ.