ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

  • 14 Jan 2024 , 11:53 PM
  • Belagavi
  • 106

ಬೆಳಗಾವಿ: 2021-22ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರಿಗೆ ಮಹಾನಗರ ಪಾಲಿಕೆಯ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಸಹಾಯ ಧನ‌ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಹಾಗೂ ಕುಟುಂಬದ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶಕ್ಕೆ ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read All News