ಬೆಳಗಾವಿಮಂಬರುವ ಎರಡು ವರ್ಷಗಳ ಕಾಲ ರಾಜ್ಯದಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.
ಅವರು ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ರಾಜ್ಯ ಬಿಜೆಪಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ ಮುಂದಿನ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಕ್ಸಿನ್ ಕಡಿಮೆ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ಡಂಗುರ ಸಾರಿಸುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.
ನಗರದ ಸಹ್ಯಾದ್ರಿ ನಗರದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಜಿಲ್ಲಾಧಿಕಾರಿ ಜತೆಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.