ಉಡುಪಿ :ಉಡುಪಿಯಲ್ಲಿ ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡಿಲು ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಇಂದು ದಿನಾಂಕ 10-06-2021 ರಂದು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 50 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಈಗಾಗಲೇ ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿ ಗೊಳಿಸಲಾಗಿದ್ದು ಪ್ರಥಮ ಹಂತಡ ಉಳುಮೆ ಕಾರ್ಯ ಪೂರ್ಣಗೊಂಡಿದೆ. ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಊರಿನ ಹಿರಿಯರು, ಭೂ ಮಾಲಕರು ಹಾಗೂ ಸ್ಥಳೀಯರಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಸದಸ್ಯರಾದ ನವೀನ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ದಿನೇಶ್ ಪೂಜಾರಿ ಮತ್ತು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಜೀವನ ಯಂತ್ರ ಅಗ್ರಿ ಸಲ್ಯೂಷನ್ಸ್ ಸಂಸ್ಥೆಯ ಶ್ರೀಕಾಂತ್ ಭಟ್ ಮತ್ತು ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.