ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯನ್ನು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ ಬೊಮ್ಮಾಯಿ

  • 18 Dec 2023 , 12:22 AM
  • Bengaluru
  • 100

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬೇರೆ ಯಾವುದೇ ತರದ ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು .

ಜೆಡಿಎಸ್ ಪಕ್ಷದ ಎಚ್ ಡಿ ರೇವಣ್ಣ ಅವರು ಅವಾಗವಾಗ ತಮ್ಮನ್ನು ಭೇಟಿ ಮಾಡಲು ಬರ್ತಾನೇ ಇರ್ತಾರೆ. ಅವರ ಜಿಲ್ಲೆ ಹಾಗೂ ಕ್ಷೇತ್ರದ ಹಲವಾರು ವಿಚಾರವಾಗಿ ಚರ್ಚೆ ಮಾಡಲು ಬರುತ್ತಿರುತ್ತಾರೆ ಎಂದು ಅವರು ಹೇಳಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಸಚಿವರ ಸಭೆ ಕರೆದಿದ್ದಾರೆ. ಅದಕ್ಕೆ ಬೇರೆ ಯಾವುದೇ ತರದ ವಿಶ್ಲೇಷಣೆ ಅವಶ್ಯಕತೆ ಇಲ್ಲ.

ಬಸವರಾಜ್ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

Read All News