ಸ್ವಾಮೀಜಿ ಕೊಲೆಗೆ ಯತ್ನ, ಆರೋಪಿ ಬಂಧನ

  • 15 Jan 2024 , 12:09 AM
  • Belagavi
  • 153
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ಮೂರು ಸಾವಿರಮಠದ ಗಂಗಾಧರ ಶ್ರೀಗಳ ಅವರ ಕೊಲೆಗೆ ಯತ್ನ ನಡೆದಿದೆ. ಈ ಸಂಬಂಧ ಅದೇ ಗ್ರಾಮದ ಮಲ್ಲಿಕಾರ್ಜುನ ಬುಡಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು. ಜಿಲ್ಲಾ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಮಠದಲ್ಲಿ ಕಳವು ಮಾಡಲು ಬಂದಾಗ ಶ್ರೀಗಳು ವಿರೋಧ ಮಾಡಿದ್ದಕ್ಕೆ, ಕೊಲೆಗೆ ಯತ್ನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆರೋಪಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read All News