ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಧಾನಿಯಾಗಲಿ ಅದರಲ್ಲಿ ನಂದೇನ ತಪ್ಪು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬೆಳಗಾವಿಯಲ್ಲಿ ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿರುವ ರಮೇಶ ಜಾರಕಿಹೊಳಿ ಅವರನ್ನು ಮತ್ತೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.