ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಬಸವರಾಜ ಬೊಮ್ಮಾಯಿ

  • 14 Jan 2024 , 11:54 PM
  • Bengaluru
  • 237

ಬೆಂಗಳೂರು: ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಅಂತರದಲ್ಲಿ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟು ಕೋವಿಡ್ ಸವಾಲನ್ನು ಯಶಸ್ವಿಯಾಗಿ ಎದುರಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಸತಿ ಸಚಿವರಾದ ವಿ ಸೋಮಣ್ಣ ಅವರು ಏರ್ಪಡಿಸಿದ್ದ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೋವಿಡ್ 19 ಎರಡನೇ ಅಲೆ ರಾಜ್ಯದಲ್ಲಿ ದೊಡ್ಡ ಸಾವು ನೋವು ಉಂಟು ಮಾಡಿದೆ. ಅದನ್ನು ಸರ್ಕಾರ ಸವಾಲಾಗಿ ಸ್ವೀಕರಿಸಿ ಅದರಲ್ಲಿ ಬಹಳಷ್ಟು ಯಶಸ್ಸು ಕಂಡಿದೆ. ಅದರ ಪರಿಣಾಮವಾಗಿ ಈಗ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ.

ಮೊದಲ ಮತ್ತು ಎರಡನೇ ಕೋವಿಡ್ ಅಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಕ್ರಾಂತಿಕಾರಕ ಹೆಜ್ಜೆಗಳನ್ನು ಇಟ್ಟಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 24000 ಆಕ್ಸಿಜನ್ ಬೆಡ್ ಗಳನ್ನು ಸಿದ್ದಪಡಿಸಿದೆ. 5000 ವೆಂಟಿಲೇಟರ್ ಬೆಡ್ ಗಳನ್ನು ಸಿದ್ದ ಮಾಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷಾ ಲ್ಯೆಬ್ ಗಳನ್ನು ತೆರೆಯಲಾಗಿದೆ. ಸೋಂಕಿತರಿಗೆ ಸಮರ್ಪಕವಾಗಿ ಔಷಧಿ ನೀಡಲಾಗಿದೆ. ಬಡವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಎಲ್ಲ ರೀತಿಯ ಚಿಕಿತ್ಸೆಯನ್ನು ನೀಡಿದ್ದೇವೆ. ಆ ಮೂಲಕ ಸರ್ಕಾರ ಸಮರ್ಥವಾಗಿ ಕೋವಿಡ್ ಎರಡನೇ ಅಲೆಯನ್ನು ಎದುರಿಸಿದೆ ಎಂದು ಬೊಮ್ಮಾಯಿ ಹೇಳಿದರು.

ವಿ ಸೋಮಣ್ಣ ಅವರು ಬಡವರಿಗಾಗಿ ಉಚಿತವಾಗಿ ದಿನಸಿ ಕೀಟಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದು ನಿಜಕ್ಕೂ ಜನ ಅಷ್ಟೇ ಅಲ್ಲ. ದೇವರು ಮೆಚ್ಚುವಂತ ಕೆಲಸ ಎಂದು ಹರ್ಷ ವ್ಯಕ್ತಪಡಿಸಿದರು.

ವಿ ಸೋಮಣ್ಣ ಅವರು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಗಲಿರುಳು ಕೆಲಸ ಮಾಡಿದ್ದಾರೆ. ಅವರಿಗೆ ಕೇವಲ ಒಂದು ಕ್ಷೇತ್ರದ ಜವಾಬ್ದಾರಿಯಿಲ್ಲ. ಬೆಂಗಳೂರಿನ ಏಳೆಂಟು ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯಿದೆ. ಎಲ್ಲ ಕ್ಷೇತ್ರಗಳಲ್ಲೂ ಅವರು ಅತಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಇದು ಅವರ ದಕ್ಷತೆ ಪ್ರಾಮಾಣಿಕತೆ ತೋರಿಸುತ್ತದೆ. ಹಗಲು ರಾತ್ರಿ ಒಂದಾಗಿ ಕೆಲಸ ಮಾಡುವ ಮಹಾನಾಯಕ ಸೋಮಣ್ಣ ಎಂದು ಬೊಮ್ಮಾಯಿ ಬಣ್ಣಿಸಿದರು.

Read All News