ಕ್ರಿಕೆಟನ್ಯೂಜಿಲೆಂಡ್ ವಿರುದ್ಧದ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯವು ಕೊಹ್ಲಿಗೆ 61 ನೇ ಪಂದ್ಯವಾಗಿದ್ದು ಧೋನಿ ಅವರ ರೆಕಾರ್ಡ್ ಮುರಿದಿದೆ.
ಮಹೇಂದ್ರ ಸಿಂಗ್ ಧೋನಿ 60 ಪಂದ್ಯಗಳಲ್ಲಿ ನಾಯಕನಾಗಿ ಆಡಿ 2014 ರ ಡಿಸೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು .
ಶ್ರೀಲಂಕಾದ ಅರ್ಜುನ ರಣತುಂಗಾ ಮತ್ತು ಪಾಕಿಸ್ತಾನದ ಮಿಸ್ಬಾ-ಉಲ್-ಹಕ್ ತಲಾ 56 ಟೆಸ್ಟ್ ಪಂದ್ಯಗಳಲ್ಲಿ ತಮ್ಮ ತಂಡಗಳಿಗೆ ನಾಯಕತ್ವ ವಹಿಸಿದ್ದರು.
61 ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ನಾಯಕ ಎಂಬ ಹೆಗ್ಗಳಿಕೆಗೆ ಕೊಹ್ಲಿ ಭಾಗಿಯಾಗಿದ್ದಾರೆ.