ಕಣಿವೆ ರಾಜ್ಯದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲು ಮುಂದಾದ ಪ್ರಧಾನಿ: ಭಾರಿ ಕುತೂಹಲ ಮೂಡಿಸಿದ ಮೋದಿ ನಡೆ

  • 15 Jan 2024 , 12:27 AM
  • Delhi
  • 105

ನವದೆಹಲಿ: ಇದೆ ಜೂನ್ .24 ರಂದು ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಮಾಡುತ್ತಿದ್ದಾರೆ. ಈ ಸಭೆಯಲ್ಲಿ ಎಲ್ಲಾ ಪಕ್ಷದ ನಾಯಕರುಗಳಿಗೂ ಅನೌಪಚಾರಿಕ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್‌ 5 2019 ರಂದು ಕೇಂದ್ರ ಸರ್ಕಾರ ಸಂವಿಧಾನದ ಅನುಚ್ಛೇಧ 370 ರ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇ‍ಷ ಅಧಿಕಾರವನ್ನು ಕಿತ್ತುಕೊಂಡು ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.

ಈ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಸರ್ವ ಪಕ್ಷಗಳ ಸಭೆ ಇದಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿಸುವ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Read All News