ವಿಶ್ವ ಯೋಗ ದಿನಾಚರಣೆ: "ಮನೆಯಿಂದಲೇ ಯೋಗ"

  • 15 Jan 2024 , 3:09 AM
  • Belagavi
  • 149

ಬೆಳಗಾವಿ :ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2021 ರ “BE WITH YOGA, BE AT HOME” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ, ಸೋಮವಾರ ಮುಂಜಾನೆ 7 ಘಂಟೆಗೆ “ಅಂತರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಆಚರಿಸಲಾಯಿತು.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ, ಸಂಸದರಾದ ‌ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರ ಗಣ್ಯರು ಹಾಗೂ ಜನಪ್ರತಿನಿಧಿಗಳು ಮನೆಯಲ್ಲಿಯೇ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕೋವಿಡ್ ಹಿನ್ನೆಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯ ಸಾಮಾಜಿಕ ಜಾಲತಾಣದಲ್ಲಿ ಹಾಗೂ ದೃಶ್ಯ ಮಾಧ್ಯಮದಲ್ಲಿ ಅನುಸರಿಸಿಕೊಂಡು “ಮನೆಯಿಂದಲೇ ಯೋಗ” ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ತಿಳಿಸಲಾಗಿತ್ತು.

Read All News