ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಟ್ಯಾಬ್ಲಾಯ್ಡ್ ವಿತರಿಸಿದ ಡಿಸಿಎಂ

  • 30 Dec 2023 , 12:04 PM
  • Belagavi
  • 120

ಬೆಳಗಾವಿ: ರಾಜ್ಯದಲ್ಲಿ ಮಹಾಮಾರಿ ಕೊರೋನ ಸೊಂಕಿನ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾಗಿದ್ದರಿಂದ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಹಿಂದುಳಿಯಬಾರದು ಎಂದು ರಾಜ್ಯಾದ್ಯಂತ 2500 ಸ್ಮಾರ್ಟ್ ಕ್ಲಾಸ್ ರೂಮ್ ಹಾಗೂ ಟ್ಯಾಬ್ಲಾಯ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದ್ದರು.ಬೆಳಗಾವಿಯ ಸರ್ದಾರ್ ಪಿಯು ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಟ್ಯಾಬ್ಲಾಯ್ಡ್ ವಿತರಣೆ ಮಾಡುವ ಮೂಲಕ ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ್ ಕಾರಜೋಳ ಅವ್ರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಜಿಲ್ಲೆಯ 22 ಕಾಲೇಜುಗಳ ಒಟ್ಟು 620 ವಿದ್ಯಾರ್ಥಿಗಳಿಗೆ ಟ್ಯಾಬ್ಲಾಯ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿದ್ದಾಗಿ ತಿಳಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನಾನುಕೂಲವಾಗಿದ್ದು, ಕಳೆದ ವರ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಗಿತ್ತು, ಅದೇ ರೀತಿ ಪ್ರಸಕ್ತ ವರ್ಷವೂ ಸಹ ಸರಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಡ್ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಪ್ರವೇಶ ಶುಲ್ಕ ವಸೂಲಾತಿ ಮಾಡಿದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಈ ವೇಳೆ ಸ್ಥಳಿಯ ಶಾಸಕ ಅನಿಲ್ ಬೆನಕೆ, ಎಂ ಎಲ್ ಸಿ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಇತರರು ಉಪಸ್ಥಿತರಿದ್ದರು.

Read All News