ಕುಂದಾನಗರಿಯಲ್ಲಿ ಕೊರೋನಾಗೆ ಮತ್ತೊಂದು ಬಲಿ

  • 9 Jan 2024 , 7:25 AM
  • Belagavi
  • 104

ಬೆಳಗಾವಿ :ಕುಂದಾನಗರಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕೊವಿಡ್-19ಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಬೆಳಗಾವಿ ಶಾಸ್ತ್ರಿ ನಗರದ ನಿವಾಸಿ 72 ವರ್ಷದ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಕೊರೋನಾ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ 18 ಜನರನ್ನು ಈಗಾಗಲೇ ಕ್ವಾರೆಂಟನ್ ಮಾಡಿದ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Read All News