ಬೆಳಗಾವಿ: ಇಂದು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಲ್ಲೋಳ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿದರು.
ಇದೇ ಗ್ರಾಮಸ್ಥರು ಗ್ರಾಮಸ್ಥರು ಪ್ರೀತಿ ಹಾಗೂ ಅಭಿಮಾನದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಸತ್ಕಾರ ಮಾಡಿದರು. . ಬಳಿಕ ಕೃಷ್ಣ ನದಿ ಬ್ರಿಡ್ಜ್ ಗೆ ಭೇಟಿ ನೀಡಿ, ನೀರಿನ ಮಟ್ಟವನ್ನು ವೀಕ್ಷಿಸಿದರು. ಪ್ರವಾಹ ಪರಿಸ್ಥಿತಿ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.
ನದಿ ತೀರದ ಜನರು ಭಯಪಡಬೇಡಿ ಎಂದು ಸ್ಥಳೀಯರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.