ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ ಪ್ರತಿಜ್ಞಾ ದಿನ

  • 14 Jan 2024 , 11:36 PM
  • Bengaluru
  • 102

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಬಹುನಿರೀಕ್ಷಿತ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮ ಇಂದು ಬೆಳಿಗ್ಗೆ 10:30 ಕ್ಕೆ ಕೆಪಿಸಿಸಿ ಕಚೇರಿ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈಗಾಗಲೇ ಎರಡು ಮೂರು ಬಾರಿ ನಿಗದಿಯಾಗಿದ್ದ ಈ ಕಾರ್ಯಕ್ರಮ ರಾಜ್ಯದಲ್ಲಿ ಹರಡಿರುವ ಕೋವಿಡ್ -19 ಮಾರ್ಗಸೂಚಿಯ ಹಿನ್ನೆಲೆಯಿಂದ ರಾಜ್ಯ ಸರ್ಕಾರ ಅನುಮತಿ ನೀಡಿರಲಿಲ್ಲ. 

ಆದರೆ ಇದೀಗ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಕೆಲವು ಶರತ್ತುಗಳನ್ನು ವಿಧಿಸಿರುವ ಕಾರಣ ಸುಮಾರು 7,800 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಲೈವ್ ಪ್ರಸಾರವಾಗಲಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದವರಿಗೆ ಮಾತ್ರ ಅವಕಾಶವಿದ್ದು ಹಾಗೂ ಸುದ್ದಿಮಾಧ್ಯಮಗಳು, ಜೂಮ್ ಆಫ್, ಫೇಸ್ ಬುಕ್ ಮೂಲಕ ನೇರಪ್ರಸಾರವಾಗಲಿದೆ. ಕಾರ್ಯಕರ್ತರು, ಅಭಿಮಾನಿಗಳು ತಾವಿರುವ ಸ್ಥಳದಲ್ಲೇ ಇದ್ದು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

Read All News