ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಗರದ ಕಟ್ಟಿಮನಿ ಸಭಾಭವನದಲ್ಲಿ ಭಾನುವಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮೋಹನ್ ಗುಂಡ್ಲೂರ್, ಬಸವ ರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.