ಬೆಳಗಾವಿ : ಇಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಹಿನ್ನೆಲೆ ಬಹುನಿರೀಕ್ಷಿತ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಸಜ್ಜಾಗಿದ್ದು ಜಿಲ್ಲಾದ್ಯಂತ550ಸ್ಥಳಗಳಲ್ಲಿನೇರಪ್ರಸಾರಕ್ಕೆವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಸ್ಥಳಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ. ಪ್ರತಿಗ್ರಾ ಪಂ, ನಗರಸಭೆ, ಪುರಸಭೆ, ಮಹಾನಗರಪಾಲಿಕೆಸೇರಿದಂತೆ ವಿವಿಧೆಡೆ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದಾರೆ.
ಡಿಕೆಸಿ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ ಮಾಡಲಿರುವ ಬೆಳಗಾವಿಯಜನತೆ, ಕಾರ್ಯಕರ್ತರುಹಾಗೂಅಭಿಮಾನಿಬಳಗದವರಿಗೆಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.