ಕೆ.ಗೋಪಾಲಯ್ಯ ಅವರ ತಾಯಿ ನಿಧನ: ಸಂತಾಪ ಸೂಚಿಸಿದ ಬೊಮ್ಮಾಯಿ

  • 15 Jan 2024 , 12:24 AM
  • Bengaluru
  • 220

ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ತಾಯಿ ಶ್ರೀಮತಿ ಕಾಳಮ್ಮ ಚೆನ್ನಿಗಪ್ಪ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇವರು ಕಾಳಮ್ಮ ಅವರ ಆತ್ಮಕ್ಕೆ ಶಾಂತಿ ಕೊಡಲಿ. ತಾಯಿಯ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಸಚಿವ ಗೋಪಾಲಯ್ಯ ಅವರಿಗೆ ಮತ್ತು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

Read All News