ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಕೂಡಾ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಯೋಚಿಸಿದೆ ಎಂದು ಸಿಟಿ ರವಿ ಟ್ವಿಟ್ ಮೂಲಕ ತಿಳಿಸಿದ್ದಾರೆ.
It is high time Karnataka brings in a new population policy on the lines of Assam and Uttar Pradesh to control its growing population.
— C T Ravi ಸಿ ಟಿ ರವಿ (@CTRavi_BJP) July 13, 2021
With the limited natural resources available, it will be difficult to meet the needs of every citizen if there is a population explosion.
ನೈಸರ್ಗಿಕ ಸಂಪನ್ಮೂಲಗಳು ಸೀಮಿತವಾಗಿದ್ದು ಜನಸಂಖ್ಯೆ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
ಏನಿದು ಜನಸಂಖ್ಯಾ ನಿಯಂತ್ರಣ ಮಸೂದೆ...?
ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರಿಗೆ ಯಾವುದೇ ವಿಶೇಷ ರಿಯಾಯಿತಿ ಅಥವಾ ಸವಲತ್ತುಗಳನ್ನು ನೀಡಬಾರದು ಮತ್ತು ಅಧಿಕೃತ ಸೌಕರ್ಯಗಳನ್ನು ಬಳಸದಂತೆ ನಿರ್ಬಂಧಿಸಬೇಕು ಎಂದು ಮಸೂದೆ ಹೇಳುತ್ತದೆ.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದನ್ನು, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಮತ್ತು ಯಾವುದೇ ರೀತಿಯ ಸರ್ಕಾರಿ ಸಹಾಯಧನವನ್ನು ಪಡೆಯುವುದನ್ನು ನಿಷೇಧಿಸಲು ಈ ಮಸೂದೆ ತಿಳಿಸುತ್ತದೆ.