ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ವ್ಯಾಪಕ‌ ಬೆಂಬಲ

  • 15 Jan 2024 , 12:55 AM
  • Bengaluru
  • 147

ಬೆಂಗಳೂರು: ರಾಜ್ಯ ಕಂಡ ಅಪ್ರತಿಮ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆಡಿಯೋ ಎನ್ನಲಾಗುತ್ತಿರುವ ತಲ್ಲಣದಿಂದ ರಾಜ್ಯ ರಾಜಕಾರಣದಲ್ಲಿ ಕಂಪನದ ಅಲೆ ಎಬ್ಬಿಸಿದೆ.

ರಾಜ್ಯದಲ್ಲಿ ದಿ.ಅನಂತಕುಮಾರ್ ಅವರೊಂದಿಗೆ ಸೈಕಲ್ ಮೂಲಕ ರ್ಯಾಲಿ ನಡೆಸಿ ಬಿಜೆಪಿಯನ್ನು ಬೇರುಮಟ್ಟದಲ್ಲಿ ಕಟ್ಟಿ ರಾಜ್ಯದಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ 25. ಸಂಸದರನ್ನು ಆಯ್ಕೆ ಮಾಡಿಸಿ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕೆ ಬಲ‌ ತುಂಬಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಕಂಡ ಅಪ್ರತಿಮ ನಾಯಕ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಗೊಂಡ ಬಳಿಕ ರಚನೆಯಾದ ಬಿಜೆಪಿ ಸರಕಾರ ಅಂದಿನಿಂದಲೂ‌ ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿ‌ ಬರುತ್ತಿತ್ತು. ಆದರೆ ಅಧಿಕಾರ ವಹಿಸಿಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹಾದಿ ಅಷ್ಟೊಂದು ಸುಲಭವಾಗಿರಲಿಲ್ಲ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಉತ್ತರ ಕರ್ನಾಟಕದಲ್ಲಿ ಎಂದೂ ಕಂಡರಿಯದ ಪ್ರವಾಹಕ್ಕೆ ಜನರು ತತ್ತರಿ‌ ಹೋಗಿದ್ದರು. ಇಡೀ‌ ಊರಿಗೆ ಊರೆ ಜಲಸಮಾಧಿಯಾಗಿತ್ತು. ಅಂಥ ಸಂದರ್ಭದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಏಕಾಂಗಿಯಾಗಿ ಪ್ರವಾಸ ಮಾಡಿ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಶ್ರೇಯ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ.

ಒಂದು ಕಡೆ ತಮ್ಮನ್ನು ನಂಬಿಕೊಂಡು ಬಿಜೆಪಿಗೆ ಬಂದ 17 ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕೊಡಿಸಿ ಆಡಳಿತಕ್ಕೆ‌‌ ಚುರುಕು ಮುಟ್ಟಿಸುವ ಹೊತ್ತಿಗೆ ಇಡೀ‌ ವಿಶ್ವವನ್ನೆ ಕಾಡಿದ ಕೊರೊನಾ ಹೆಮ್ಮಾರಿಯಿಂದ ದೇಶ ಲಾಕ್ ಡೌನ್‌ ಘೋಷಣೆ ಮಾಡುವ ಮುನ್ನವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯವನ್ನು ಲಾಕ್ ಡೌನ್ ಮಾಡಿ ಜನರ ರಕ್ಷಣೆ ನಿಂತರು. ರಾಜ್ಯಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದರು. ಕೊರೊನಾ ಸಂದರ್ಭದಲ್ಲಿ ಯಡಿಯೂರಪ್ಪನವರು ತೆಗೆದುಕೊಂಡ ನಿರ್ಣಯಕ್ಕೆ ಕೇಂದ್ರ ಸರಕಾರವೇ ಶಬ್ಬಾಸ್ ಗಿರಿ ನೀಡಿತ್ತು.

ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ರಾಜ್ಯ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ವಿಚಾರ ಬರುತ್ತಿದ್ದಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕ್ರಪ್ಪ, ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಜೆಡಿಎಸ್ ನಾಯಕರು, ವಿವಿಧ ಮಠಾಧೀಶರು ಯಡಿಯೂರಪ್ಪನವರ ಪರವಾಗಿ ಗಟ್ಟಿ ಧ್ವನಿ ಎತ್ತಿದ್ದಾರೆ.

ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಮುನ್ನ ಪೂರ್ವಾಪರ ವಿಚಾರ ಮಾಡಬೇಕಿದೆ. ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಎರಡೂ‌ ವರ್ಷ ಇದೆ. ಅಲ್ಲಿಯವರೆಗೂ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರನ್ನು ಮುಂದುವರೆಸಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿ ಪಕ್ಷವನ್ನು ಸ್ವಂತ ಬಲದಲ್ಲಿ ಅಧಿಕಾರಕ್ಕೆ‌ ಬಂದ ಬಳಿಕ ನಾಯತ್ವ ಬದಲಾವಣೆ ಮಾಡಬಹುದು ಎಂದು ತಿಳಿದು ಬಂದಿದೆ.

Read All News