ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮತ್ತು ಮಹದಾಯಿ,ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.ಮನವಿ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿ,ಪ್ರಧಾನ ಮಂತ್ರಿಗಳಿಗೆ ರವಾನಿಸಲಾಗಿದೆ. ಈ ಹೋರಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ.
ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ನಡೆದ ಈ ಕಾಲ್ನಡಿಗೆ ಜಾಥಾದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾದ H.K ಕುಮಾರಸ್ವಾಮಿ ಸೇರಿದಂತೆ ಪಕ್ಷದ ವಿಧಾನಸಭಾ ಸದಸ್ಯರು, ವಿಧಾನಪರಿಸತ್ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.