ಬೆಂಗಳೂರು : ಸಚಿವ ಸಂಪುಟ ರಚನೆಯಲ್ಲಿ ಒಟ್ಟು 29 ಜನ ಶಾಸಕರು ನೂತನ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಡಿಸಿಎ ಹುದ್ದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು. ಪ್ರಸ್ತುತ ಡಿಸಿಎಂ ಹುದ್ದೆ ಇರುವುದಿಲ್ಲ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬಗ್ಗೆ ಹೈಕಮಾಂಡ್, ಅರುಣ ಸಿಂಗ್ ಮಾತನಾಡಿದ್ದಾರೆ. ರಾಜಭವನಕ್ಕೆ ಕಳುಹಿಸಿದ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಇಲ್ಲ ಎಂದು ಉತ್ತರಿಸಿದರು.