ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಕೋಟ್ಯಾಂತರ ರೂಪಾಯಿ ಹಾನಿಯಾಗಿದೆ. ಸಂತ್ರಸ್ತರಿಗೆ ಸೂಕ್ತ ಸ್ಥಳದಲ್ಲಿ ಇಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ಅವರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಢಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಹದಿಂದ ಜಿಲ್ಲೆಯಲ್ಲಿ ಸುಮಾರು 51 ಕಾಳಜಿ ಕೇಂದ್ರ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ಅವರಿಗೆ ಊಟ, ಔಷಧೋಪಚಾರ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಾನೂವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರಸಕ್ತ ವರ್ಷದ ಪ್ರವಾಹದಿಂದ ಸಾಕಷ್ಟು ನಷ್ಟವಾಗಿದೆ. ಪಂಚಾಯತ್ ರಾಜ್ಯ ಇಲಾಖೆಯ ಸುಮಾರು 500 ಕಿಲೋಮೀಟರ್ ರಸ್ತೆ ಹಾಳಾಗಿದೆ. ಇದರಲ್ಲಿ 772 ಕೋಟಿ ರು.ಗಳಷ್ಟು ಹಾನಿಯಾಗಿದೆ. ಒಟ್ಟಾರೆ. ಜಿಲ್ಲೆಯಲ್ಲಿ 7,800 ಕೋಟಿ ರು.ಗಳಷ್ಟು ಹಾನಿಯಾಗಿದೆ. ಆದ್ದರಿಂದ ಜಿಲ್ಲಾಧಿಕಾರಿ ಗಳಿಗೆ ಸರ್ವೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.
ಕಳೆದ ಬಾರಿಯಲ್ಲಿನ ಪ್ರವಾಹರ ಪರಿಹಾರ ತಲುಪಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಆದ್ದರಿಂದ ಈ ಬಾರಿ ನೇರವಾಗಿ ಆರ್ ಟಿಜಿಸಿ ಮೂಲಕವೇ ಪರಿಹಾರ ಕೊಡಲಾಗುವುದು ಎಂದರು.
ಪ್ರವಾಹದಿಂದ ಜೀವ ಹಾನಿ ನಾಲ್ಕು ಆಗುವೆ.ಕೋಳಿ ಫಾರಮ್ ಕೊಚ್ಚಿ ಹೋಗಿರುವ ವರದಿಯೂ ಆಗಿವೆ. ಅವರಿಗೆ ಸೂಕ್ತ ಪರಿಹಾರ ಕೊಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.