ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು. ಹಿಂಡಲಾ ಜೈಲಿನಲ್ಲಿ ವಿನಯ್ ಕುಲಕರ್ಣಿ ಇದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನವಾಗಿತ್ತು. ಬುಧವಾರ ಸುಪ್ರೀಂಕೋರ್ಟ್ ಮಾಜಿ ಸಚಿವ, ಕಾಂಗ್ರಸ್ ನಾಯಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀಜು ಮಂಜೂರು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆದ್ದರಿಂದ ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆ ಯನ್ನು ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.
2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿಸಲಾಗಿತ್ತು. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಜಾಮೀನು ನೀಡಿದರೂ ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ.
ಬಿಜೆಪಿ ನಾಯಕ ಯೋಗೇಶ್ ಗೌಡರನ್ನು ಜಿಮ್‌ನಲ್ಲಿ ಜೂನ್ 15, 2016ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಿಜೆಪಿ ಸರ್ಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಹತ್ಯೆ ಪ್ರಕರಣದ ತನಿಖೆ ಕೈಗೊಂಡ ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.