75 ನೇ ಸ್ವಾತಂತ್ರ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

  • 15 Jan 2024 , 2:50 AM
  • Belagavi
  • 119

ಬೆಳಗಾವಿ: ಬೆಳಗಾವಿ ಜಿಲ್ಲಾ ಆಡಳಿತದ ವತಿಯಿಂದ 2021 ರ 75 ನೇ ವರ್ಷದ ಅಮೃತ ಮಹೋತ್ಸವ ಸ್ವಾತಂತ್ರೋತ್ಸವದ ಸಾರ್ವಜನಿಕ ಸಮಾರಂಭ ಜಿಲ್ಲಾ ಕ್ರೀಡಾಂಗಣ( ಕೆ.ಎಲ್.ಇ ಆವರಣ)ದಲ್ಲಿ ಭಾನುವಾರ (ಆ.15) ನಡೆಯಲಿದೆ.

ಜಲಸಂಪನ್ಮೂಲ ಇಲಾಖೆ ಮತ್ತು ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಸಂದೇಶ ನೀಡಲಿದ್ದಾರೆ.

ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read All News