ಪಾಲಿಕೆ ಚುನಾವಣೆ ಇಂದು ಸ್ಥಳೀಯ ಮುಖಂಡರ ಜತೆಗೆ ಚರ್ಚೆ: ಮಾಜಿ ಸಚಿವ ಎಂ.ಬಿ.ಪಾಟೀಲ

  • 18 Dec 2023 , 12:42 AM
  • Belagavi
  • 81

ಬೆಳಗಾವಿ:ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುವ ಕುರಿತು ಇಂದು ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಸಾಧಕ, ಬಾಧಕ ವರದಿಯನ್ನು ಪಕ್ಷದ ವರಿಷ್ಠರಿಗೆ ವರದಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು ಅವರು ಸೋಮವಾರ ಕಾಂಗ್ರೆಸ್ ಭವನದ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರು ಸೂಚನೆ ಮೆರೆಗೆ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ ಧಾರವಾಡದ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಿದ್ದಾರೆ. ಆದ್ದರಿಂದ ಬೆಳಗಾವಿಯಲ್ಲಿ ಸ್ಥಳೀಯ ಮುಖಂರ ನಿಲುವು ಮುಖ್ಯವಾಗಿರುತ್ತದೆ. ಬಳಿಕ ಸಾಧಕ‌,‌ಬಾಧಕ ಕುರಿತು ಚರ್ಚೆ ನಡೆಸಿ ಪಕ್ಷಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

Read All News