ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • 15 Jan 2024 , 12:23 AM
  • Bengaluru
  • 132

ಬೆಂಗಳೂರು : ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಮುಖಂಡರ ನಿಯೋಗವನ್ನು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ರಾಜ್ಯದ ಪ್ರಗತಿಗೆ ಇನ್ನಷ್ಟು ವೇಗ ತರುವ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳುತ್ತಿದ್ದೇನೆ. ಉತ್ತಮ ಮೂಲಭೂತಸೌಕರ್ಯಗಳು ಆರ್ಥಿಕ ಚಟುವಟಿಕೆಗೆ ಇಂಬು ನೀಡುತ್ತದೆ. ಬಡವರ ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಾನು ಕೆಲಸ ಪ್ರಾರಂಭಿಸಿದ್ದೇನೆ ಎಂದರು.

'ಸ್ವಾತಂತ್ರೋತ್ಸವ ದಿನಾಚರಣೆಯಂದು ಮಾಡಿದ ಘೋಷಣೆಗಳ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ನಮ್ಮ ಸರ್ಕಾರ ಮಾಡುತ್ತಿರುವ ಕೆಲಸ ಜನರನ್ನು ತಲುಪುವ ರೀತಿಯಲ್ಲಿ ಅಧಿಕಾರಿ ವರ್ಗ ಕೆಲಸ ಮಾಡಬೇಕು ಎಂದು ಈಗಾಗಲೇ ಆದೇಶ ಕೊಟ್ಟಿದ್ದೇನೆ' ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮೊದಲಾದವರು ಉಪಸ್ಥಿತರಿದ್ದರು.

Read All News