ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಿಸಿ: ಹೆಬ್ಬಾಳಕರ್ ಆಗ್ರಹ

  • 6 Jan 2024 , 2:32 AM
  • Belagavi
  • 165

ಬೆಳಗಾವಿ: ಅಪಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಮುಂದಾಗುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಕನ್ನಡಿಗರು ಅಪಘಾನಿಸ್ಥಾನದಲ್ಲಿ ವಿವಿಧ ವೃತ್ತಿಯಲ್ಲಿ ತೊಡಗಿದ್ದಾರೆ. ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಈ ಮೂಲಕ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Read All News