ಕುಡಚಿ-ಬಾಗಲಕೋಟೆ ರೈಲ್ವೆ ಮಾರ್ಗ ಕಾಮಗಾರಿಗೆ ಗ್ರೀನ್ ಸಿಗ್ನಲ್
- 23 Dec 2023 , 10:05 AM
- Belagavi
- 106
ಬೆಳಗಾವಿ: ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆಗೆ ಅಗತ್ಯ ಭೂ ಸ್ವಾಧೀನಕ್ಕೆ ಸಂಬಂಧಪಟ್ಟ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಕೂಡಲೆ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ಜರುಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚ್ಚಿಡೋಣಿ ಮತ್ತು ಲೋಕಾಪುರ ಮಾರ್ಗದವರೆಗಿನ 10 ಕಿಲೋ ಮೀಟರ್ ಕಾಮಗಾರಿಯನ್ನೂ ಆರಂಭಿಸಲು ಈಗಾಗಲೇ ಸೂಚಿಸಲಾಗಿದೆ, ಕಾಂಗ್ರೆಸ್ ನವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಆರೋಪದಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಮಹಾಮಾರಿ ಕಾಲದಲ್ಲಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಸುರೇಶ ಅಂಗಡಿ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.