ಪಾಲಿಕೆಯ ಸುತ್ತ ಪೊಲೀಸ್ ಸರ್ಪಗಾವಲು: ಡಿಸಿಪಿ ಅಮಟೆ

  • 15 Jan 2024 , 1:11 AM
  • Belagavi
  • 105

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಇಲ್ಲಿಯವರೆಗೆ 70 ನಾಮಪತ್ರ ಸಲ್ಲಿಕೆಯಾಗಿದ್ದು, ಇನ್ನೂ ಬೇರೆ ಬೇರೆ ವಾಡ್೯ಗಳ ನಾಮಪತ್ರ ಸಲ್ಲಿಕೆಯಾಗಲಿದ್ದು ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮಟೆ ಹೇಳಿದರು.

ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಕಡೆ 12 ಆರ್ ಓ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಲ್ಲಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

ಟಿಳಕವಾಡಿ, ಖಡೇಬಜಾರ್, ಮಾರ್ಕೆಟ್, ಎಪಿಎಂಸಿ ಹಾಗೂ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಜಿಲ್ಲಾ ಚುನಾವಣಾ ಅಧಿಕಾರಿ ಅವಕಾಶ ಕಲ್ಪಿಸಿದ್ದಾರೆ. ಅಲ್ಲಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

144 ಜಾರಿಯಿದೆ. ಐದು ಜನರ ಮೇಲೆ ಸೇರುವುದಿಲ್ಲ. ಇಲ್ಲಿಯವರೆಗೆ ಯಾವುದೇ ಸಮಸ್ಯೆಯಿಲ್ಲ. ಚುನಾವಣೆ ಇದೆ. ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಹೇಳಿದರು.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಮಹಾರಾಷ್ಟ್ರದ ಜನರು ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ನಾವು ಚರ್ಚೆ ಮಾಡುತ್ತೇವೆ ಎಂದರು.

Read All News