ಬೆಂಗಳೂರು :ವಿವಿಧ ಹಿಂದೂ ಸಂಘಟನೆಗಳು ಹಾಗೂ ಸ್ವಪಕ್ಷದಲ್ಲಿನ ನಾಯಕರ ಒತ್ತಡಕ್ಕೆ ಮಣಿದ ಸರಕಾರ ಕೋವಿಡ್ ಮಾರ್ಗಸೂಚಿಯ ಪ್ರಕಾರ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವಕಾಶ ಕಲ್ಪಿಸಿದ್ದಾರೆ. ಭಾನುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಅಲ್ಲದೆ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ ಮಾಡಿದೆ. ಗಣೇಶೋತ್ಸವ ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ.
ಸರಕಾರಿ ಮತ್ತು ದೊಡ್ಡ ಜಾಗಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಗ್ರೀನ್ ಸಿಗ್ನಲ್ ನೀಡಿದೆ. ನಗರ ಪ್ರದೇಶಗಳಲ್ಲಿ ವಾರ್ಡ್ಗೆ 1ರಂತೆ ಮೂರ್ತಿ ಪ್ರತಿಷ್ಠಾಪಿಸಬಹುದು.ಯಾವುದೇ ಮನರಂಜನಾ ಕಾರ್ಯಕ್ರಮ, ಡಿಜೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಹಾಗು ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆಗೆ ನಿರ್ಭಂದ ಹೇರಲಾಗಿದೆ.
ನಿಗದಿತ ಸದಸ್ಯರಿಂದ ಮಾತ್ರ ನಿಗದಿತ ಸ್ಥಳಗಳಲ್ಲಿ ವಿಸರ್ಜನೆ ಅವಕಾಶ ಕಲ್ಪಿಸಿದ್ದು,ಹಳ್ಳಿಗಳಲ್ಲಿ ಕೆರೆಗಳಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಲಾಗಿದೆ.