ಬೆಳಗಾವಿ ಮಹಾನಗರ ಪಾಲಿಕೆ: ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲು

  • 14 Jan 2024 , 10:16 PM
  • Belagavi
  • 93

ಬೆಳಗಾವಿ :ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ‌ ಸಂಬಂಧಿಸಿದಂತೆ ಮೀಸಲಾತಿ ಪ್ರಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ‌ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

23 ನೇ ಅವಧಿಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿಪಡಿಸಿ ಫೆಬ್ರವರಿ 11, 2021 ರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ. ಈ‌ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ‌ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಸದರಿ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.

Read All News