ಪಾಲಿಕೆಯ ನೂತನ ಬಿಜೆಪಿ ಸದಸ್ಯರಿಗೆ ಅಭಿನಂದನಿಸಿದ ಸಿಎಂ ಬೊಮ್ಮಾಯಿ‌

  • 15 Jan 2024 , 2:37 AM
  • Bengaluru
  • 94

ಬೆಂಗಳೂರು : ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ 35 ಜನ ಬಿಜೆಪಿ ಪಾಲಿಕೆ ಸದಸ್ಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿದರು. ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ, ಬಿ ಸಿ ಪಾಟೀಲ, ಬೈರತಿ ಬಸವರಾಜ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ ಮತ್ತು ಇತರರು ಉಪಸ್ಥಿತರಿದ್ದರು.

Read All News