ಬೆಳಗಾವಿ: ಬೆಳಗಾವಿ ವಡಗಾವಿ ಲಕ್ಷ್ಮಿ ನಗರದಲ್ಲಿ ಪಾನ್ ಬೀಡಾ ಅಂಗಡಿ ಇಟ್ಟುಕೊಂಡಿದ್ದ ಬಡ ವ್ಯಾಪಾರಿ ಬಾಲಕೃಷ್ಣ ಶೆಟ್ಟಿ ಅವರನ್ನು ಇತ್ತೀಚೆಗೆ ಭೀಕರವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ವ್ಯಾಪಾರಿಗಳು ಪ್ರತಿಭಟನೆ ನಡೆಸಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಡಳಿತಕ್ಕೆ ಮನವಿಯೊಂದನ್ನು ಸಲ್ಲಿಸಿದರು.
ಇದಕ್ಕೂ ಮುನ್ನ ಗಾಂಧಿನಗರ ಬಂಟರ ಭವನದಲ್ಲಿ ಸಭೆ ನಡೆಸಿ ನೇರವಾಗಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತರಿಗೆ ಮನವಿ ಸಲ್ಲಿಸಲಿದ್ದಾರೆ. ಅಮಾಯಕ ಬಡ ವ್ಯಾಪಾರಿಗೆ ಆದ ಸಾವಿನ ಕುರಿತು ಬೆಳಗಾವಿಯ ವ್ಯಾಪಾರಿ ವಲಯ ಕಳವಳಕ್ಕೊಳಗಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲಾ ವ್ಯಾಪಾರಿಗಳ ಸಂಘಟನೆಯವರು ಭಾಗವಹಿಸಿದ್ದರು.