ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು

  • 14 Jan 2024 , 11:56 PM
  • Belagavi
  • 156

ಯಮಕನಮರಡಿ:ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟಾಂಗ್ ನೀಡಿದರು.

ಮತಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 50 ವರ್ಷಗಳ ಕಾಲ ದೇಶವನ್ನು ಆಳಿದೆ. ಅನೇಕ ಉದ್ಯೋಗಗಳನ್ನು ಸೃಷ್ಟಿಸಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ. ಇದನ್ನು ವಿಜಯೇಂದ್ರಗೆ ತಿಳಿದುಕೊಳ್ಳಬೇಕು ಎಂದರು.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ 7 ವರ್ಷಗಳ ಆಡಳಿತಾವಧಿಯಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ ಎಂಬುದನ್ನು ವಿಜಯೇಂದ್ರ ಚಿಂತನೆ ಮಾಡಲಿ. ರಾಜಕೀಯಕ್ಕಾಗಿ ಸುಮ್ಮನೆ ಹೇಳಿಕೆ ನೀಡಿದರೇ ಪ್ರಯೋಜನವಿಲ್ಲ ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರೇ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಸತೀಶ ಪ್ರತಿಕ್ರಿಯಿಸಿದರು.

Read All News