ಉಚಿತ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದ ಸಂಸದೆ ಮಂಗಳಾ ಅಂಗಡಿ

  • 14 Jan 2024 , 11:35 PM
  • Belagavi
  • 98

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಖಾಸಗಿ ಆಸ್ಪತ್ರೆಯ ನೆರವಿನೊಂದಿಗೆ ಬಿಜೆಪಿ ಗ್ರಾಮೀಣ ಮಂಡಳಿಯಿಂದ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆಯಲ್ಲಿ ಸಂಸದೆ ಮಂಗಳಾ ಅಂಗಡಿ ಭಾಗವಹಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಜನ್ಮದಿನದ ಪ್ರಯುಕ್ತ ನಾನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಎಸ್‌ಸಿ ಮೋರ್ಚಾದ ಸದಸ್ಯ ಪೃಥ್ವಿ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸೇವಾ ಹಿ ಸಮರ್ಪನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಆಯುಷ್ ಮಾನ್ ಕಾರ್ಡ್ ಮೂಲಕ ದೇಶದ ಜನರ ಆರೋಗ್ಯಕ್ಕೆ ಒತ್ತು ನೀಡಿರುವುದು ಹೆಮ್ಮೆಯ ಸಂಗತಿ ಎಂದರು. ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಧನಂಜಯ ಪಾಟೀಲ, ಮಾಜಿ ಶಾಸಕ ಮನೋಹರ ಕಡೋಲ್ಕರ್, ರಾಮಚಂದ್ರ ಮಣ್ಣೋಳ್ಕರ್, ಪಾಲಿಕೆ ಸದಸ್ಯರಾದ ಸಂತೋಷ, ವೀಣಾ ವಿಜಾಪುರೆ, ರೂಪಾ ಚಿಕಲದಿನ್ನಿ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

Read All News