ಸೌದಿ ಅರೇಬಿಯಾ ವಿದೇಶಾಂಗ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ಪ್ರಧಾನಿ ಮೋದಿ

  • 18 Dec 2023 , 1:29 AM
  • Delhi
  • 192

ನವದೆಹಲಿ: ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ನವದೆಹಲಿಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು ಎಂದು ವಿದೇಶಾಂಗ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಮತ್ತು ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನರವರು ಭಾರತದ ಪ್ರಧಾನಮಂತ್ರಿ ಮತ್ತು ಭಾರತೀಯ ಜನರಿಗೆ ಶುಭಾಶಯಗಳನ್ನು ರವಾನಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಸಚಿವರು ಮತ್ತು ಪ್ರಧಾನಿ ಮೋದಿ ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಐತಿಹಾಸಿಕ ಮತ್ತು ಘನ ಸಂಬಂಧಗಳನ್ನು ಪರಿಶೀಲಿಸಿದರು ಮತ್ತು ಎರಡೂ ದೇಶಗಳ ಉತ್ತಮ ಹಿತಾಸಕ್ತಿ ಸಾಧಿಸಲು ಅವುಗಳನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು ಎಂದು ಸಚಿವಾಲಯ ತಿಳಿಸಿದೆ.

ಸೌದಿ ಅರೇಬಿಯಾದ ವಿದೇಶಾಂಗ ಸಚಿವ, ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರನ್ನು ಬರಮಾಡಿಕೊಂಡು ಸಂತೋಷವಾಗಿದೆ. ದ್ವಿಪಕ್ಷೀಯ ಸಹಕಾರ ಉಪಕ್ರಮಗಳು ಮತ್ತು ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿದರು ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ ತಿಳಿಸಿದ್ದಾರೆ.

Read All News