ಭಾರತ್ ಬಂದ್ ಗೆ ಬೆಂಬಲ ನೀಡದ ಜಿಲ್ಲೆಯ ಜನತೆ

  • 14 Jan 2024 , 10:57 PM
  • Belagavi
  • 110

ಬೆಳಗಾವಿ: ಕೇಂದ್ರ ಸರಕಾರದ ಕೃಷಿ ಮಸೂದೆ ಕಾಯ್ದೆ, ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕರೆಯಲಾದ ಭಾರತ್ ಬಂದ್ ಗೆ ಬೆಳಗಾವಿ ಜಿಲ್ಲೆಯಲ್ಲಿ‌ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೆಟ್ ಬಳಿ ಕಾಂಗ್ರೆಸ್ ಕ್ರಿಸಾನ್ ರಾಜ್ಯ ಸಂಚಾಲಕ‌ ರಾಜೇಂದ್ರ ಪಾಟೀಲ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಇನ್ನೂ ಕೇಂದ್ರ ಸರಕಾರ ಜಾರಿಗೆ ತಂದ ನೂತನ ಕೃಷಿ ಕಾನೂನುಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ದೇಶಾದ್ಯಂತ ವಿವಿಧ ರೈತ ಸಂಘಟನೆಗಳಿಂದ ಭಾರತ್ ಬಂದ್‍ಗೆ ಕರೆ ನೀಡಲಾಗಿದೆ. ನಗರದ ರಾಣಿ ಚನ್ನಮ್ಮಾ ವೃತ್ತದಲ್ಲಿ ರೈತಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರಕಾರ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಚೆನ್ನಮ್ಮ ವೃತ್ತ ಬೆಳಗಾವಿಗೆ ಮುಖ್ಯ ಮಾರ್ಗವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಹೋರಾಟಗಾರರಿಗೆ ತಿಳಿಸಿದರು. ಆದರೆ ಹೋರಾಟಗಾರರು ಅದಕ್ಕೆ ಒಪ್ಪದೇ ಇದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಜನಜೀವನ ಎಂದಿನಂದೆ ಇದ್ದು ಬಂದ್‍ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Read All News