ದೆಹಲಿ : ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿದೆ. ನ.2 ರಂದು ಮತಎಣಿಕೆ ನಡೆಯಲಿದೆ. ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ. ಉದಾಸಿ ಹಾಗೂ ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಅವರ ನಿಧನದಿಂದ ಉಪ ಚುನಾವಣೆ ನಡೆಯಬೇಕಿದೆ.