ಬೆಂಗಳೂರು :ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ಈ ಬಾರಿ ಸಾರ್ವಜನಿಕಗಣೇಶಉತ್ಸವಕ್ಕೆಬ್ರೇಕ್ಬಿದ್ದಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ವೈರಸ್ ನಿಯಂತ್ರಣ ಮಾಡಲು ಸರ್ಕಾರವು ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳುತ್ತಿದೆ ಹೌದು ಈ ವರ್ಷ ಗಣೇಶ ಉತ್ಸವ ಮಾಡುವುದಿಲ್ಲ ಎಂದಿದೆ.
ಯಾವುದೇ ಕಾರಣಕ್ಕೂ ಹೆಚ್ಚು ಜನರು ಸೇರುವ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ . ಮುಂದಿನ ದಿನದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ .
ಈ ತಿಂಗಳಲ್ಲಿ ಶ್ರಾವಣ ಮಾಸ ಪ್ರಾರಂಭವಾಗುತ್ತದೆ, ನಾಗರ ಪಂಚಮಿ, ವರಮಹಾಲಕ್ಷ್ಮಿ ಹಬ್ಬ , ಮುಂದಿನ ತಿಂಗಳು ಗಣೇಶೋತ್ಸವ ಇದೆ . ಸಾರ್ವಜನಿಕವಾಗಿ ಆಚರಣೆ ಮಾಡುವುದರಿಂದ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡದಂತೆ ಸೂಚಿಸಿದ್ದಾರೆ