ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ತಂಡಗಳನ್ನು ರಚಿಸಿಕೊಂಡು, ಬಿಮ್ಸ್ ಸೇರಿದಂತೆ ಇತರೆ ಕಡೆಗಳಲ್ಲಿ ಕೋವಿಡ್ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಗತ್ಯವಿರುವ ಜನರಿಗೆ ತಕ್ಷಣ ಹಾಸಿಗೆ ಒದಗಿಸಬೇಕು ಎಂದು ರಮೇಶ ಜಾರಕಿಹೊಳಿ ಸೂಚಿಸಿದ್ದಾರೆ. ಜೊತೆಗೆ ಕೊರೊನಾಗೆ ಲಾಕಡೌನ್ ಮಾಡುವುದು ಪರಿಹಾರವಲ್ಲ ಜನರು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಜನರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿದ್ದಾರೆ.