ಬೆಳಗಾವಿ :ಜಿಲ್ಲೆಯ ಎರಡು ಕಡೆಗಳಲ್ಲಿ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಗೋಕಾಕ ಹಾಗೂ ಬೆಳಗಾವಿ ನಗರದ ಬಂಗಾರದ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ನಗರದ ಪ್ರತಿಷ್ಠಿತ ಬಂಗಾರದ ಅಂಗಡಿ ಹಾಗೂ ಗೋಕಾಕ ಬಂಗಾರದ ಅಂಗಡಿಯ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ದಾಳಿ ಮಾಡಲಾದ ಬಂಗಾರದ ಅಂಗಡಿಯ ಸುತ್ತಲೂ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.