ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿ; ಶಾಸಕಿ ಲಕ್ಷ್ಮೀ ಹೆಬ್ಬಾಳಕರ

  • 19 Dec 2023 , 9:36 AM
  • Belagavi
  • 91
<strong>ಬೆಳಗಾವಿ</strong>: ಕಿಲ್ಲರ್ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪೌರ ಕಾರ್ಮಿಕರು ಜೀವ ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ಇಂಥ ಪೌರಕಾರ್ಮಿಕ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಮೃತಪಟಿದ್ದಾನೆ ಈ ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಪೌರಕಾರ್ಮಿಕನ ಸಾವಿಗೆ ಕಾರಣರಾದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೃತಪಟ್ಟ ಪೌರಕಾರ್ಮಿಕನಿಗೆ ಸರ್ಕಾರ ಕೂಡಲೇ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪೌರ ಕಾರ್ಮಿಕರ ಜೊತೆಗೂಡಿ ಮಹಾನಗರ ಪಾಲಿಕೆ ಎದುರು ಧರಣಿ ನಡೆಸಿದರು.

Read All News