ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತಿ ಪಡೆದಿದ್ದ ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ಅಗಲಿಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪರವರು ಸಂತಾಪ ಸೂಚಿಸಿದ್ದಾರೆ.
ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ಅಕಾಲಿಕ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಕನ್ನಡ ಭಾಷೆ, ನೆಲ,ಜಲ ಗಳ ಹೋರಾಟಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ತಾವೇ ಖುದ್ದಾಗಿ ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತು,ಹೋರಾಟಗಳಿಗೆ ತಾರ್ಕಿಕ ಅಂತ್ಯ ಕಾಣಿಸುತಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.
ಪಾಟೀಲರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳೀಗೆ ನೀಡಲಿ ಎಂದು, ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಕೋರಿದ್ದಾರೆ.