ಸಚಿವ ಈಶ್ವರಪ್ಪ ವಜಾಗೆ ಕಾಂಗ್ರೆಸ್ ಪಟ್ಟು

  • 15 Jan 2024 , 12:04 AM
  • Belagavi
  • 91

ಬೆಳಗಾವಿ : ಕೆಂಪು ಕೋಟೆಯ ಮೇಲೆ ಸಚಿವ ಈಶ್ವರಪ್ಪ ಕೇಸರಿ ಧ್ವಜ ಹಾರಿಸುವ ಹೇಳಿಕೆ ಖಂಡಿಸಿ ಸೋಮವಾರ ಬೆಳಗಾವಿ ಹಾಗೂ ಚಿಕ್ಕೋಡಿ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರ ಧ್ವಜ ಇರುವಲ್ಲಿ ಕೇಸರಿ ಧ್ವಜ ಹಾರಿಸುತ್ತೆವೆ ಎಂಬ ಅರ್ಥದಲ್ಲಿ ರಾಷ್ಟ್ರ ಧ್ವಜ ಕೇಸರಿ ಮತವು ಹುತ್ತದ ಎಂದಿರುವ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಸಚೀವ ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಕಾಂಗ್ರೆಸ್ ಆಗ್ರಹಿಸಿತು.

ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ. ಈಶ್ವರಪ್ಪ ವಿರುದ್ದ ಸಚೀವ ಸ್ಥಾನದಿಂದ ವಜಾಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಚಿಕ್ಕೋಡಿ ಎಸಿಗೆ ಮನವಿಸಲ್ಲಿಸಿದರು. ಬೆಳಗಾವಿಯಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Read All News